ತುಂಗಭದ್ರಾ ಜಲಾಶಯದ ಒಳಹರಿವು ಇಳಿಕೆ: 45 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

TB Dam backside
ತುಂಗಭದ್ರಾ ಜಲಾಶಯ ಭರ್ತಿಯಾಗಿರುವುದು.
Published on

ಹೊಸಪೇಟೆ: ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದರಿಂದ ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರಿ ಇಳಿಕೆಯಾಗಿದೆ. ಗುರುವಾರ 74,390 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದೆ. 45,253 ಹೊರ ಹರಿವು ಇದೆ. 1633.75 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 1632.75 ಅಡಿ ನೀರು ಸಂಗ್ರಹಗೊಂಡಿದೆ. 100.85 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 99.893 ಟಿಎಂಸಿ ನೀರು ಸಂಗ್ರಹಗೊಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಮಳೆ ಕ್ಷೀಣಿಸಿದೆ. 2 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ಒಳಹರಿವು ಏಕಾಏಕಿ ಇಳಿಮುಖವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net