ಜಂತುಹುಳ ನಿವಾರಣೆಗೆ ಶಿಕ್ಷಕರು ಕೈ ಜೋಡಿಸಿ

05 MANJU 06
Published on

ಹೊಸಪೇಟೆ: ಜಿಲ್ಲೆಯ ಪ್ರತಿ ಮಕ್ಕಳನ್ನು ಜಂತುಹುಳ ಮುಕ್ತರನ್ನಾಗಿಸಲು ಕಡ್ಡಾಯವಾಗಿ ಉಚಿತ ಮಾತ್ರೆ ವಿತರಣೆಗೆ ಆರೋಗ್ಯ ಇಲಾಖೆ ಜತೆಗೆ ಶಿಕ್ಷಕರು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ನಿಮಿತ್ತ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ರಾಜ್ಯಾದ್ಯಂತ 2015-16 ನೇ ಸಾಲಿನಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಸಲಾಗುತ್ತಿದೆ. ಡಿ.9 ರಂದು ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳ ಮುಖಾಂತರ ಒಂದ ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮ ವಿವಿಧ ಇಲಾಖೆಗಳ ಸಮನ್ವಯತೆಯಿಂದ ನಡೆಯಬೇಕು. ಈ ಮೂಲಕ ಜಿಲ್ಲೆಯ ಎಲ್ಲಾ ಮಕ್ಕಳನ್ನು ಜಂತುಹುಳು ಮುಕ್ತರನ್ನಾಗಿಸಲು ಪ್ರಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಡಿಎಚ್‌ಒ ಡಾ.ಶಂಕರ ನಾಯ್ಕ, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ ನಾಯಕ, ಕೊಪ್ಪಳದ ಕಿಮ್ಸ್ನ ವೈದ್ಯ ಡಾ.ನಾರಾಯಣ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಭದ್ರಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net