

ಹೊಸಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ನಗರದ ತಹಸೀಲ್ ಕಚೇರಿ ಮುಂದೆ ಗುರುವಾರ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಿದರು.
ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಶನ್ ಹಾಗೂ ಲೇಖನಿ ಸ್ಥಗಿತಗೊಳಿಸುವ ಮೂಲಕ ಮುಷ್ಕರವನ್ನು ನಡೆಸಿದರು. ಕಂದಾಯ ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ ಸುಮಾರು 21ಕ್ಕೂ ಅಧಿಕ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಶನ್ ಬಳಸಲು ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಅವಶ್ಯವಿರುವ ಮೊಬೈಲ್ ಸಾಧನ, ಲ್ಯಾಪ್ ಟಾಪ್ ಜತೆಗೆ ಅವಶ್ಯವಿರುವ ಇಂಟರ್ ನೆಟ್ ಹಾಗೂ ಸ್ಕಾö್ಯನರ್ ಒದಗಿಸದೇ ಕರ್ತವ್ಯ ನಿರ್ವಹಿಸಲು ಸೂಚಿಸಿದೆ. ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವು ಆಗುತ್ತಿದೆ. ಜತೆಗೆ ಮಾರಣಾಂತಿಕ ಹಲ್ಲೆಗಳು ನಡೆಯುತ್ತಿದ್ದು, ಎಲ್ಲಾ ಮೊಬೈಲ್ ಆ್ಯಪ್‌ಗಳಲ್ಲಿ ಏಕ ಕಾಲದಲ್ಲಿ ಪ್ರಗತಿ ಸಾಧಿಸಲು ಒತ್ತಡ ಹೇರುತ್ತಿರುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗುತ್ತಿದೆ ಎಂದು ಆಗ್ರಹಿಸಿದರು.
ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್ ಹುಕ್ಕುಂ, ಹಕ್ಕುಪತ್ರ, ನಮೂನೆ ವೆಬ್ ಅಪ್ಲಿಕೇಶನ್ ಪೌತಿ ಆ್ಯಪ್ ಮೊಬೈಲ್ ತಂತ್ರಾAಶಗಳ ಕೆಲಸ ನಿರ್ವಹಿಸದಂತೆ ರಾಜ್ಯ ಸಂಘ ತೀರ್ಮಾನದ ಹಿನ್ನೆಲೆ ಸ್ಥಗಿತ. ಇದರ ಜತೆಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಬೇಕು. ಜೇಷ್ಟತೆಯನ್ನು ರಾಜ್ಯ ಮಟ್ಟದ ಜೇಷ್ಟತೆಯನ್ನಾಗಿ ಪರಿಗಣಿಸುವುದು. ಪ್ರಯಾಣ ಭತ್ಯೆ 500 ರಿಂದ 3 ಸಾವಿರ ರೂ. ವರೆಗೂ ಹೆಚ್ಚಿಸಬೇಕು. ಕೆಲಸದ ಅವಧಿ ಕೆಲಸದ ಬಳಿಕ ನಡೆಯುವ ಎಲ್ಲಾ ಬಗೆಯ ವರ್ಚುವಲ್ ಸಭೆಯನ್ನು ನಿಷೇಧಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಉಪ ತಹಸೀಲ್ದಾರ್‌ಮಂಜುನಾಥ್, ಶಿರಸ್ತದಾರ್‌ಗಳಾದ ಅಮರನಾಥ್, ಶ್ರೀಧರ್, ಶಿವರತ್ನ, ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂದನಗೌಡ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ರವಿಚಂದ್ರ ಎಸ್.ಗೊಗ್ಗಿ, ಗ್ರಾಮ ಸಹಾಯಕರ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಶ್, ನಿವೃತ್ತ ನೌಕರ ಮಾರ್ಕಂಡೇಯ ಇತರರಿದ್ದರು.