ಹೊಸಪೇಟೆ: ಈ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಡಿಯಲ್ಲಿ ಜಿಲ್ಲೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://vijayanagara.nic.in/ ಗೆ ಭೇಟಿ ನೀಡಬಹುದು. ಅರ್ಜಿಗಳನ್ನು ಸ್ವೀಕರಿಸಲು ಜು.29 ರವರೆಗೆ ಅವಕಾಶವಿರಲಿದೆ. ಅರ್ಜಿಗಳನ್ನು ಕಚೇರಿಯ ಸಮಯದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಜು.29ರ ಸಂಜೆ 5.30 ರೊಳಗೆ ಸ್ವೀಕರಿಸಲಾಗುವುದು. ಹೆಚ್ಚಿನ ಮಾಹಿತಿಯನ್ನು ಈ ಕಚೇರಿಯ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.