

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಅ.17ರಂದು ಬೆಳಗ್ಗೆ 10 ಗಂಟೆಗೆ ನಗರದ ಭುವನೇಶ್ವರಿ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಉದ್ಘಾಟಿಸುವರು. ಶಾಸಕ ಎಚ್.ಆರ್.ಗವಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.