ಹೊಸಪೇಟೆ: ವಾಲ್ಮೀಕಿ ಜಯಂತಿ ಆಚರಣೆ ಪ್ರಯುಕ್ತ ಕೂಡ್ಲಿಗಿ ಪಟ್ಟಣ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಂತೆ ಶಾಂತ ರೀತಿಯಿಂದ ಜಯಂತಿ ಆಚರಿಸಲು ಅ.16ರಂದು ಬೆಳಿಗ್ಗೆ 6ರಿಂದ ಅ 17ರ ರಾತ್ರಿ 12ರ ವರೆಗೆ ಕೂಡ್ಲಿಗಿ ಪಟ್ಟಣ ವ್ಯಾಪ್ತಿಯಲ್ಲಿನ ಮದ್ಯದಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡದಂತೆ ಹಾಗೂ ಮದ್ಯದಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಎಂ.ಎಸ್.ದಿವಾಕರ ಆದೇಶ ಹೊರಡಿಸಿದ್ದಾರೆ.