ವಿಜಯನಗರ ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ

26 HPT 1
Published on

ಹೊಸಪೇಟೆ: ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನಗರದಲ್ಲಿ ಭಾನುವಾರ ಪ್ರತ್ಯೇಕವಾಗಿ ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಾಸಿಮಯ್ಯ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಡಿಸಿ ಕಚೇರಿಯ ತಹಸೀಲ್ದಾರ್ ಪ್ರತಿಭಾ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಅಧ್ಯಾಪಕ ಸಂಗಮೇಶ ಎಸ್. ಗಣಿ ವಿಶೇಷ ಉಪನ್ಯಾಸ ನೀಡಿದರು. ಕಚೇರಿ ಸಿಬ್ಬಂದಿ ಇದ್ದರು. ತಹಸಿಲ್ ಕಚೇರಿಯಲ್ಲಿ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಕಚೇರಿಯ ತಹಸೀಲ್ದಾರ್ ವಿಶ್ವಜಿತ್ ಮೆಹ್ತಾ ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಂದಾಯ ಇಲಾಖೆಯ ಮಲ್ಲಿಕಾರ್ಜುನಗೌಡ, ಶ್ರೀಧರ್ ಇತರ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net