ಸಚಿವ ಜಮೀರ್ ಅತಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ

Republic Day
ಹೊಸಪೇಟೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಧ್ವಜಾರೋಹಣ ನೆರವೇರಿಸಿ ಪೊಲೀಸ್ ರಿಂದ ಧ್ವಜ ವಂದನೆ ಸ್ವೀಕರಿಸಿದರು.
Published on

ಹೊಸಪೇಟೆ: ಜಿಲ್ಲಾಡಳಿತದಿಂದ ನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಿಸಲಾಯಿತು.

ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ದೇಶದ ಅತಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿಸಿದರು.
ನಂತರ ಪೊಲೀಸ್ ರಿಂದ ಧ್ವಜ ವಂದನೆ ಸ್ವೀಕರಿಸಿದರು.

ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಶ್ವದಳ, ವಿವಿಧ ತುಕಡಿಗಳು ಹಾಗೂ ಶಾಲಾ ಕಾಲೇಜುಗಳ ವಿವಿಧ ತಂಡಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದವು. ನಂತರ ವಿವಿಧ ಶಾಲಾ ಕಾಲೇಜುಗಳ ತಂಡಗಳಿಂದ ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶನ ನಡೆಯಿತು.


ಶಾಸಕ ಎಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಎಸ್ಪಿ ಬಿ.ಎಲ್.ದಿವಾಕರ, ಸಿಇಒ ಸದಾಶಿವ ಪಿ.ಪ್ರಭು, ಎಡಿಸಿ ಅನುರಾಧ, ಪದ್ಮಶ್ರೀ ಮಂಜಮ್ಮ ಜೋಗತಿ, ತಹಸೀಲ್ದಾರ್ ವಿಶ್ವಜಿತ್ ಮಹೇತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net