ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿ

17 MANJU 08
Published on

ಹೊಸಪೇಟೆ : ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಶ್ರೀ ವಿಶ್ವಕರ್ಮ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net