ಮತದಾರರ ಪಟ್ಟಿ ನೋಂದಾಣಿಗೆ ಅರ್ಜಿ

03 MANJU 08
Published on

ಹೊಸಪೇಟೆ: ರಾಜ್ಯದ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿದ್ದು, ನೋಂದಣಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ನ.01ನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಈ ಹೊಸ ಪಟ್ಟಿ ಸಿದ್ಧಪಡಿಸುವ ಕಾರ್ಯ ಆರಂಭವಾಗಿದೆ. ಹಿಂದಿನ ಪಟ್ಟಿಯಲ್ಲಿ ಹೆಸರು ಹೊಂದಿರುವ ಮತದಾರರು ಕೂಡ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ನ.06 ಅರ್ಜಿ ನಮೂನೆ 19 ಸ್ವೀಕರಿಸಲು ಕೊನೆಯ ದಿನ. ನ.25 ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಅ.10 ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಧಿ ನಿಗಧಿಪಡಿಸಲಾಗಿದೆ. ಅ.30 ಅಂತಿಮ ಮತದಾರರ ಪಟ್ಟಿ ಪ್ರಕಟ ಆಗಲಿದೆ. ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬAಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net