ಕುಡಿವ ನೀರನ್ನು ಪರೀಕ್ಷಿಸುವುದು ಕಡ್ಡಾಯ

03 MANJU 09
Published on

ಹೊಸಪೇಟೆ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿವ ನೀರು ಸರಬರಾಜು ಮುನ್ನ ಕಡ್ಡಾಯವಾಗಿ ಪರೀಕ್ಷಿಸಬೇಕು ಎಂದು ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಕ್ರಂ ಅಲಿ ಷಾ ಹೇಳಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರೋಗ್ಯ ಹಿತದೃಷ್ಟಿಯಿಂದ ಕಡ್ಡಾಯವಾಗಿ ಶುದ್ಧ ಕುಡಿವ ನೀರಿನ ಘಟಕ, ಜಲಜೀವನ್ ಮಿಷನ್‌ನಿಂದ ಪೂರೈಕೆಯಾಗುವ ನೀರನ್ನು ಕಡ್ಡಾಯವಾಗಿ ಕುಡಿಯುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ನಿರಂತವಾಗಿ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಶುದ್ಧ ಕುಡಿವ ನೀರು ಪೂರೈಕೆ ಮುನ್ನ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ಎಲ್ಲಾ ಗ್ರಾಪಂಗಳಲ್ಲಿ ಎಫ್‌ಟಿಕೆ ಕಿಟ್ ಮೂಲಕ ನೀರನ್ನು ಪರೀಕ್ಷಿಸಿ ವರದಿ ನೀಡಬೇಕು. ನೀರಿನಿಂದಾಗಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆರೋಗ್ಯ ಹಿತದೃಷ್ಟಿಯಿಂದ ಕುಡಿವ ನೀರಿನ ಶುದ್ಧತೆಯ ಬಗ್ಗೆ ಗಮನವಿರಲಿ. ಜಲ ಜೀವನ್ ಮಿಷನ್ ಯೋಜನೆಯಲ್ಲಿ ಮುಕ್ತಾಯಗೊಂಡ ಕಾಮಗಾರಿಗಳನ್ನು ಹರ್ ಘರ್ ಜಲ್ ಎಂದು ಘೋಷಣೆ ಮಾಡಿ ದಿನದ 24 ಗಂಟೆ ನೀರು ಸರಬರಾಜು ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮವಹಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಮತ್ತು ವಸತಿ ಶಾಲೆಗಳಲ್ಲಿ ಕಡ್ಡಾಯವಾಗಿ ನೀರು ಪರೀಕ್ಷೆ ಮಾಡಿ ಸರಬರಾಜು ಮಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net