ಹೊಸಪೇಟೆ: ಜಿಲ್ಲೆಯ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಕೆ.ಜಿ.ಮಹಾಂತೇಶ್ ಕಂಚಿಮಠ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ hಣಣಠಿ://viರಿಚಿಥಿಚಿಟಿಚಿgಚಿಡಿಚಿ.ಟಿiಛಿ.iಟಿ ವೆಬ್‌ಸೈಟ್ ಮುಖಾಂತರ ಅರ್ಜಿಸಲ್ಲಿಸಬಹುದು. ಅರ್ಜಿಸಲ್ಲಿಸಲು ಜ.17 ರಿಂದ ಫೆ.16 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಗ್ರಾಮೀಣ ಕೈಗಾರಿಕೆ ಕಚೇರಿ, ಜಿಲ್ಲಾ ಪಂಚಾಯತ್, ಹೊಸಪೇಟೆ ರಸ್ತೆ ಬಳ್ಳಾರಿ ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿಗಳು ಹೊಸಪೇಟೆ ಮತ್ತು ಹಗರಿಬೊಮ್ಮನಹಳ್ಳಿ - 9035547140, ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ ಮತ್ತು ಕೊಟ್ಟೂರು- 9844200579 ಸಂಖ್ಯೆಗಳಿಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.