ಅನುಮಾನಸ್ಪದವಾಗಿ ಮಹಿಳೆ ಶವ ಪತ್ತೆ

ಅನುಮಾನಸ್ಪದವಾಗಿ ಮಹಿಳೆ ಶವ ಪತ್ತೆ
Published on

ಹೊಸಪೇಟೆ : ನಗರದ ರೈಲ್ವೆ ನಿಲ್ದಾಣದಲ್ಲಿ ದುರಸ್ತಿಗೆ ನಿಲ್ಲಿಸಿದ ಬೋಗಿಯೊಂದರಲ್ಲಿ ಅಂದಾಜು 30 ವರ್ಷದ ಮಹಿಳೆ ಶವ ಪತ್ತೆಯಾಗಿದ್ದು, ಬಳ್ಳಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಹಿಳೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಾಲ್ಕು ದಿನಗಳ ಹಿಂದೆ ರೈಲು ಬೋಗಿಯಲ್ಲಿ ಮೃತಪಟ್ಟಿರ ಬಹುದು ಎಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದುರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರೈಲ್ವೆ ನಿಲ್ದಾಣದ ಒಳಗಡೆ ಹಾಗೂ ಹೊರಗಡೆಯ ಸಿಸಿ ಟಿವಿ ದೃಶ್ಯಾವಳಿಗಳನ್ನು ಕೂಡ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net