ಪ್ರವಾಸೋದ್ಯಮದಿಂದ ಕ್ಷೇತ್ರ ಅಭಿವೃದ್ಧಿ ಸಾಧ್ಯ

28 MANJU 03
Published on

ಹೊಸಪೇಟೆ: ವಿಜಯನಗರ ಕ್ಷೇತ್ರದಲ್ಲಿ ವಿಳಂಬವಾಗುತ್ತಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪರ‍್ಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಶಾಸಕ ಎಚ್.ಆರ್.ಗವಿಯಪ್ಪ ಭರವಸೆ ನೀಡಿದರು.

ನಗರದಲ್ಲಿ ಸೋಮವಾರ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲೂಕಿನಲ್ಲಿ ಕೆಲವು ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ. ಅವುಗಳ ಪೈಕಿ ಅನಂತಶಯನಗುಡಿಯ ಸೇತುವೆ ಕಾಮಗಾರಿಯು ಒಂದು. ಈಗಾಗಲೇ ಸೇತುವೆ ಒಂದು ಭಾಗದಲ್ಲಿ ಕಾಮಗಾರಿ ಮುಂದುವರೆದಿದ್ದು, ಪುರಾತತ್ವ ಇಲಾಖೆಯವರು ಆಕ್ಷೇಪಣೆ ವ್ಯಕ್ತ ಪಡಿಸಿದ ಕಾರಣ ಹಂಪಿ ಕಡೆಯ ಭಾಗದಲ್ಲಿ ಕೆಲಸ ಆರಂಭವಾಗಿಲ್ಲ. ರೈಲ್ವೆ ಇಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರೊಂದಿಗೆ ದೆಹಲಿಗೆ ತೆರಳಿ ಪುರಾತತ್ವ ಇಲಾಖೆಯಿಂದ ಅನುಮೋದನೆ ಪಡೆಯಲಾಗುತ್ತದೆ. ಸೇತುವೆ ಕಾಮಗಾರಿ ಪರ‍್ಣಗೊಂಡರೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಿದಂತಾಗುತ್ತದೆ. ಪ್ರವಾಸೋದ್ಯಮದಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಅನಂತಶಯನಗುಡಿಯ ಸೇತುವೆ ಕೆಳಗೆ ವಂತಿಕೆ ಅನುದಾನದ ಅಡಿ 1.45 ಕೋಟಿ ವೆಚ್ಚದಲ್ಲಿ ಒಳಚರಂಡಿ ಹಾಗೂ ನೀರಿನ ಪೈಪ್‌ಲೈನ್ ಕಾಮಗಾರಿ ಮತ್ತು ರಾಷ್ಟ್ರೀಯ ಹೆದ್ದಾರಿ 50ರ ಬಳಿಯ ನೀರು ಶುದ್ದೀಕರಣ ಘಟಕದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ (ಡಿ.ಎಂ.ಎಫ್) ಅನುದಾನದ ಅಡಿ 6.30 ಕೋಟಿ ವೆಚ್ಚದಲ್ಲಿ ಶುದ್ದೀಕರಣ ಘಟಕಕ್ಕೆ ಕಚ್ಚಾ ನೀರು ಪೂರೈಸಲು ಪೈಪ್‌ಲೈನ್ ಅಳವಡಿಕೆ ಹಾಗೂ 2.60 ಕೋಟಿ ವೆಚ್ಚದಲ್ಲಿ ಶುದ್ದೀಕರಿಸಿದ ನೀರು ಶೇಖರಿಸಲು 20 ಲಕ್ಷ ಲೀಟರ್ ಸರ‍್ಮಥ್ಯದ ನೆಲಹಾಸು ಟ್ಯಾಂಕ್ ನರ‍್ಮಾಣ ಹಾಗೂ ವಿವಿಧ ಕಾಮಗಾರಿಗಳಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಲಾಗಿದೆ. ನಂತರ ನಗರಕ್ಕೆ ಬೇಕಾಗುವಷ್ಟು ನೀರು ಪೂರೈಕೆಯಾಗುತ್ತಿರುವುದರ ಬಗ್ಗೆ ಮಾಹಿತಿ ಪಡೆದು, ಕಾಮಗಾರಿಗಳ ತರ‍್ತು ಆರಂಭಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿರುವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net