

ಹೊಸಪೇಟೆ : ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪುರವರು ಕನ್ನಡಿಗರ ಮನದಾಳದಲ್ಲಿ ಅಜರಾಮರರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು,
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ವಿಶ್ವಮಾನವ ದಿನಾಚರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಕುವೆಂಪುರವರು ಸಾಹಿತ್ಯದ ಮೂಲಕ ಜಾತಿ ಮತಬೇಧಗಳನ್ನು ಮೀರಿ ಮನುಜಮತ, ವಿಶ್ವಪಥ ಎಂಬ ಸಂದೇಶವನ್ನು ಸಾರಿದ್ದಾರೆ. ಅವರೊಬ್ಬ ಶ್ರೇಷ್ಠ ವಿಶ್ವಮಾನವರಾಗಿದ್ದು, ಅವರ ತತ್ವಾದರ್ಶಗಳನ್ನು ಇಂದಿನ ಯುವಜನತೆ ಅರಿಯಬೇಕಿದೆ ಎಂದರು.
ಜಿ.ಪಂ.ಉಪಕಾರ್ಯದರ್ಶಿ ಭೀಮಪ್ಪ ಲಾಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ ಇದ್ದರು.