ಯುವಕರು ದೇಶಿಯ ಸಂಸ್ಕೃತಿ ಅನುಸರಿಸಲಿ

24 MANJU 03
Published on

ಹೊಸಪೇಟೆ: ಗಾನಗಂಗಾ ಕಲಾ ಪ್ರತಿಷ್ಠಾನದಿಂದ ನಗರದ ಗೌತಮಬುದ್ದ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ರಾತ್ರಿ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ ನಡೆಯಿತು.

ಸಂಸದ ಈ.ತುಕರಾಂ ಉದ್ಘಾಟಿಸಿ ಮಾತನಾಡಿ, ಈಗಿನ ಯುವ ಸಮುದಾಯ ಪಾಶ್ಚಿಮಾರ್ತ್ಯ ಸಂಸ್ಕೃತಿಗಳಿಗೆ ಮಾರುಹೋಗಿ ನಮ್ಮ ದೇಶಿಯ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಯುವಕರಿಗೆ ನಮ್ಮ ನೆಲದ ಸೊಗಡಿನ ಕಲೆ ಸಾಹಿತ್ಯ, ಸಂಗೀತದ ಕುರಿತು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಂಗೀತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಮಾಡಿಕೊಡುತ್ತೇನೆ. ಜಿಲ್ಲೆಯಾಧ್ಯಂತ ಸ್ಮಾರ್ಟ್ ಕ್ಲಾಸ್‌ಗಳನ್ನು ತೆರೆಯುವುದಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

ಸಿದ್ದಯ್ಯನ ಕೋಟೆಯ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದರು. ಸಂಗೀತ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಲವರಿಗೆ ಗೌರವಿಸಲಾಯಿತು. ನಾನಾ ಗಾಯಕ, ಗಾಯಕಿಯರಿಂದ ಸಂಗೀತ ನೃತ್ಯ ಕಾರ್ಯಕ್ರಮಗಳು ನಡೆದವು.

ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ರಷ್ಮಿ ರಾಜಶೇಖರ್ ಹಿಟ್ನಾಳ್, ಸಿದ್ದಯ್ಯನ ಕೋಟೆಯ ಶ್ರೀ ಬಸವಲಿಂಗ ಸ್ವಾಮೀಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net