ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

31 HPT 5
Published on

ಹೊಸಪೇಟೆ: ಈ ಭಾಗದಲ್ಲಿ ಬೆಳೆಯುವ ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಸರ್ಕಾರ ಮುಂದಾಗಬೇಕು ಎಂದು ರಾಜ್ಯ ರೈತ ಸಂಘದಿAದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ವಾಲ್ಮೀಕಿ ಸರ್ಕಲ್‌ನಿಂದ ಎಪಿಎಂಸಿ ಸರ್ಕಲ್, ಸಾಯಿ ಬಾಬಾ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಅನುರಾಧ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಸುಮಾರು ೧೦ ಲಕ್ಷ ಟನ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆಯಲಾಗುತ್ತದೆ. ಸ್ಥಳೀಯವಾಗಿ ಸಕ್ಕರೆ ಕಾರ್ಖಾನೆ ಇಲ್ಲದ ಕಾರಣ ಮೈಲಾರ, ಮುಂಡರಗಿ, ದುಗ್ಗಾವತಿ ಮತು ಸಿರಗುತ್ತ ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಲಾಗುತ್ತದೆ. ಆದರೆ, ಸೂಕ್ತ ಬೆಲೆ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆಯಾ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದು ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ಮನವಿ ಮಾಡಿದರು.

ಹೊಸಪೇಟೆಯಲ್ಲಿ ವಿಜಯನಗರ ಶುರ‍್ಸ್ ಕಂ. ಸ್ಥಗಿತಗೊಂಡಿದ್ದರಿAದ ಸ್ಥಳೀಯ ರೈತರಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸರ್ಕಾರ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.
ಸÀಂಘದ ತಾಲೂಕು ಅಧ್ಯಕ್ಷ ಗಂಟೆ ಸೋಮಶೇಖರ್, ಪ್ರಮುಖರಾದ ಗೋಣಿಬಸಪ್ಪ, ರವಿ ತಂಬ್ರಹಳ್ಳಿ, ಏಣಿಗಿ ನಾಗರಾಜ್, ಹುಲಿಗೆಮ್ಮ, ಉಮಾ ಮಹೇಶ್ವರ್ ದಮ್ಮೂರ್, ಮಹೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net