ನಗರ ಕಾಂಗ್ರೆಸ್ ಸಮಿತಿಯಿಂದ ಆಸ್ಪತ್ರೆ ಪರಿಶೀಲನೆ

ನಗರ ಕಾಂಗ್ರೆಸ್ ಸಮಿತಿಯಿಂದ ಆಸ್ಪತ್ರೆ ಪರಿಶೀಲನೆ
Published on

ಸೋಮವಾರಪೇಟೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ 1.60 ಕೋಟಿ ರೂ. ವೆಚ್ಚದ ಸರ್ಕಾರಿ ಆಸ್ಪತ್ರೆ ಉನ್ನತೀಕರಣ ಕಾಮಗಾರಿ ಪ್ರಾರಂಭವಾಗಿದ್ದು, ನಗರ ಕಾಂಗ್ರೆಸ್ ಸಮಿತಿ ಹಾಗೂ ರಕ್ಷಾ ಸಮಿತಿ ಪದಾಧಿಕಾರಿಗಳು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು.

ಇಲಾಖೆ ಇಂಜಿನಿಯರ್ ನಾಗರಾಜು ಮತ್ತು ಗುತ್ತಿಗೆದಾರ ಶ್ರೀನಿವಾಸ್ ಅವರೊಂದಿಗೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದುಕೊಂಡ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಂಜುನಾಥ್, ತಾಲೂಕಿನಲ್ಲಿ ಮಳೆಗಾಲದಲ್ಲಿ ಹೆಚ್ಚು ಗಾಳಿಯೊಂದಿಗೆ ಮಳೆ ಸುರಿಯುತ್ತದೆ. ಗುಣಮಟ್ಟದ ಕಾಮಗಾರಿ ನಡೆಸದಿದ್ದರೆ, ಛಾವಣಿ ಹಾರಿ ಹೋಗಿರುತ್ತದೆ. ಒಳರೋಗಿಗಳ ಕೊಠಡಿಗಳು ಸೋರದಂತೆ ಕಾಮಗಾರಿ ನಡೆಸಬೇಕು ಎಂದು ಹೇಳಿದರು.

ಶೌಚಗೃಹ ಸೇರಿದಂತೆ, ನೀರು ಸರಬರಾಜಿನ ಪೈಪ್‌ಲೈನ್ ಅಳವಡಿಕೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಟೈಲ್ಸ್, ಇಂಟರ್‌ಲಾಕ್ ಅಳವಡಿಕೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅವಶ್ಯಕವಿರುವ ಸೌಲಭ್ಯಗಳ ಬಗ್ಗೆ ಶಾಸಕ ಡಾ.ಮಂತರ್‌ಗೌಡ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಶಸ್ತ್ರಚಿಕಿತ್ಸಕ ಡಾ.ಜಮೀರ್ ಹೇಳಿದರು.

ಭೇಟಿ ಸಂದರ್ಭ ರಕ್ಷಾ ಸಮಿತಿ ಸದಸ್ಯರಾದ ಮಂಜುಳಾ ಹರೀಶ್, ಕೆ.ಪಿ.ರವೀಶ್, ಜಾಕಬ್ ಸೈಮನ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಾಂತರಾಜ್, ಶೀಲಾ ಡಿಸೋಜ, ಮೀನಾ ಕುಮಾರಿ, ಜಮೀರ್, ಮಹಮ್ಮದ್ ಶಫಿ, ಎಂ.ಎ.ರುಬಿನಾ, ವಿನಿ, ವಿನೋದ್, ರಿಯಾಜ್, ಸಂತೋಷ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net