ಬಿ.ಹೊಸೂರು ಆಸ್ಪತ್ರೆಗೆ ಎಸ್‌ಎಂಕೆ ಹೆಸರು: ಶಾಸಕ ರವಿಕುಮಾರ್ ಗಣಿಗ ಹೇಳಿಕೆ

Mla-Ravikumar-Ganiga
Published on

ಮಂಡ್ಯ: ತಾಲೂಕಿನ ಬಿ.ಹೊಸೂರು ಕಾಲನಿಯಲ್ಲಿ ನಿರ್ಮಾಣವಾಗಿರುವ ತಾಯಿ ಮತ್ತು ಮಗು ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಿಡಲಾಗುವುದು ಎಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ.

ನಾಡಿಗೆ ಎಸ್‌ಎಂಕೆ ಅವರ ಕೊಡುಗೆ ಅಪಾರ. ಅವರನ್ನು ಕಳೆದುಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಗೌರವ ಸೂಚಿಸುವ ಸಲುವಾಗಿ ಆಸ್ಪತ್ರೆಗೆ ಹೆಸರಿಡಲಾಗುವುದು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದ್ದು, ಇಬ್ಬರೂ ಒಪ್ಪಿಗೆ ನೀಡಿದ್ದಾರೆ ಎಂದಿದ್ದಾರೆ.

ಇನ್ನು ಬೆಂಗಳೂರು-ಮೈಸೂರು ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡಿದ ಹೆಗ್ಗಳಿಕೆ ಎಸ್‌ಎಂಕೆ ಅವರಿಗೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ ನಗರದ ಉದ್ಯಾನವೊಂದಕ್ಕೆ ಅವರ ಹೆಸರನ್ನಿಡಲಾಗುವುದು. ಈ ಕುರಿತು ನಗರಸಭೆ ಸಾಮಾನ್ಯಸಭೆಯಲ್ಲಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net