ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಶಾಸಕ ರವಿಕುಮಾರ್ ಗಣಿಗ ಸೂಚನೆ

Hostel building construction work Mandya
Published on

ಮಂಡ್ಯ: ಸಾವಿರಾರೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಸ್ಟೆಲ್ ನಿರ್ಮಾಣವಾಗುತ್ತಿದೆ. ಆದ್ದರಿಂದ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಶಾಸಕ ರವಿಕುಮಾರ್ ಗಣಿಗ ಸೂಚನೆ ನೀಡಿದರು.

ಇಲ್ಲಿನ ಚಾಮುಂಡೇಶ್ವರಿ ನಗರದಲ್ಲಿ 6 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ಹಾಸ್ಟೆಲ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿನಿಯರಿಗೆ ವಸತಿ ನಿಲಯದಲ್ಲಿ ಕೊಠಡಿಗಳ ಕೊರತೆ ಇರುವುದನ್ನು ಗಮನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಕಟ್ಟಡದಲ್ಲಿ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಲಿಫ್ಟ್ ನಿರ್ಮಾಣ ಮಾಡಲಾಗುವುದು. ಕಾರ್ಲೆ ಗ್ರೂಪ್‌ನವರು ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಗುಣಮಟ್ಟದ ಕಾಮಗಾರಿ ಮಾಡುವಂತೆ ತಿಳಿಸಲಾಗಿದೆ. ಮುಂದಿನ ಒಂದು ವರ್ಷದೊಳಗಾಗಿ ಕಟ್ಟಡವನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡುವ ಮೂಲಕ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸಿದ್ದಲಿಂಗೇಶ್, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ನಾಗೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net