ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಹಾಸ್ಟೆಲ್​: 12 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

y n boys hostel
Published on

ತುಮಕೂರು: ಶಾರ್ಟ್ ಸರ್ಕ್ಯೂಟ್​ನಿಂದ ಬಾಲಕರ ವಿದ್ಯಾರ್ಥಿ ನಿಲಯ ಹೊತ್ತಿಉರಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್​ ಹೊಸಕೋಟೆಯಲ್ಲಿ ನಡೆದಿದೆ. ಅದೃಷ್ಟವಶಾತ್​ 15 ವಿದ್ಯಾರ್ಥಿಗಳು ಪ್ರಣಾಪಾಯಾದಿಂದ ಪಾರಾಗಿದ್ದಾರೆ.

ವೈಎನ್ ಹೊಸಕೋಟೆಯ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಶಾರ್ಟ್ ಸರ್ಕೂಟ್​ನಿಂದ ಕಾಣಿಸಿಕೊಂಡ ಬೆಂಕಿಗೆ ವಸತಿ ನಿಲಯದ ಕಿಟಕಿ ಬಾಗಿಲು, ಪ್ಯಾನ್​ಗಳು ಸೇರಿದಂತೆ 30ಕ್ಕೂ ಹೆಚ್ಚು ಬೆಡ್ ಗಳು ಸುಟ್ಟಿ ಭಸ್ಮವಾಗಿವೆ.

ಮಧ್ಯರಾತ್ರಿ ಸುಮಾರು ಒಂದು ಗಂಟೆಗೆ ವಿದ್ಯಾರ್ಥಿ ನಿಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿದ್ಯಾರ್ಥಿಗಳು ಕೋಣೆಯಿಂದ ಹೊರಗಡೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳಕ್ಕೆ ವೈ.ಎನ್. ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೈ.ಎನ್. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net