ಹಾಸ್ಟೆಲ್ಗಳಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ

dvg dc
Published on

ದಾವಣಗೆರೆ: ಎಂ.ಸಿ.ಸಿ ಬಿ. ಬ್ಲಾಕ್‌ನಲ್ಲಿ, ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್ಗೆ ರಾತ್ರಿ ಭೇಟಿ ನೀಡಿ ಶುಚಿತ್ವ, ಊಟೋಪಚಾರ, ಮೆನು ಅನ್ವಯ ನೀಡಲಾಗುತ್ತಿರುವ ಆಹಾರದ ಬಗ್ಗೆ ಮತ್ತು ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ವಿದ್ಯಾರ್ಥಿಗಳಿಗೆ ಚೆನ್ನಾಗಿ ವ್ಯಾಸಂಗ ಮಾಡುವ ಮೂಲಕ ಜಿಲ್ಲೆಗೆ ಉತ್ತಮ ಹೆಸರು ತರಬೇಕೆಂದು ಹಾಗೂ ಹಾಸ್ಟೆಲ್ನಲ್ಲಿ ಕುಂದುಕೊರತೆಗಳಿದ್ದಲ್ಲಿ ನನ್ನ ಗಮನಕ್ಕೆ ತರುವಂತೆಯೂ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net