

ಮಸ್ಕಿ: ಪಟ್ಟಣದ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್‌ನಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು, ಒದಗಿಸುವಂತೆ ಆಗ್ರಹಿಸಿ ವಿದ್ಯಾರ್ಥಿನಿಯರು ಶಾಸಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್‌ನಲ್ಲಿ ಕುಡಿಯುವ ನೀರು ಸರಿಯಾಗಿ ಬರುತ್ತಿಲ್ಲ. ಶೌಚಗೃಹಗಳು ಸರಿಯಾಗಿಲ್ಲ ಎಂದು ಆರೋಪಿಸಿದರು. ಶಾಸಕರ ಕಚೇರಿ ಸಹಾಯಕ ವೆಂಕನಗೌಡ ಮನವಿ ಸ್ವೀಕರಿಸಿದರು. ವಿದ್ಯಾರ್ಥಿನಿಯರು ಪ್ರತಿಭಟನೆ ಹಿಂಪಡೆಯದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಅರಮನೆ ಸುಧಾ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ವಿದ್ಯಾರ್ಥಿನಿಯರೊಂದಿಗೆ ಹಾಸ್ಟೆಲ್‌ಗೆ ತೆರಳಿ ಪರಿಶೀಲನೆ ನಡೆಸಿದರು. ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದರು.