ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿ

09LNG-1
ಲಿಂಗಸುಗೂರಿನಲ್ಲಿ ಎಸಿ ಅವಿನಾಶ ಶಿಂಧೆಗೆ ಎಸ್‌ಎಫ್‌ಐ ಕಾರ್ಯಕರ್ತರು ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ, ವಿಶ್ವ ಅಂಗಡಿ, ಪವನ್ ಕಮದಾಳ್, ಸುಮಿತ್ರಾ, ರೋಜಾ, ಯಲ್ಲಪ್ಪ ಇದ್ದರು.
Published on

ಲಿಂಗಸುಗೂರು: ತಾಲೂಕಿನ ಎಲ್ಲ ವಸತಿ ನಿಲಯಗಳಲ್ಲಿ ಮೂಲಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಆಗ್ರಹಿಸಿ ಎಸಿ ಅವಿನಾಶ ಶಿಂಧೆಗೆ ಎಸ್‌ಎಫ್‌ಐ ಕಾರ್ಯಕರ್ತರು ಮಂಗಳವಾರ ಮನವಿ ಸಲ್ಲಿಸಿದರು.

ಕೆಲವು ವರ್ಷಗಳಿಂದ ವಸತಿ ನಿಲಯಗಳಿಗೆ ಸರಿಯಾದ ಸೌಕರ್ಯ ನೀಡದೆ, ಕಳಪೆ ಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಕೆಲ ವಾರ್ಡನ್‌ಗಳು ವಿದ್ಯಾರ್ಥಿಗಳಿಗೆ ತಲುಪಿಸುತ್ತಿಲ್ಲ,

ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸದ ವಾರ್ಡನ್‌ಗಳು

ಈ ಬಗ್ಗೆ ಪ್ರಶ್ನಿಸುವ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು. ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಕುಂದು-ಕೊರತೆಗಳನ್ನು ಆಲಿಸಿ ಮುಂದಿನ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net