ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Crime Logo
Published on

ರಾಣೆಬೆನ್ನೂರ: ನಗರದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಇಲ್ಲಿಯ ಶಹರ ಠಾಣೆ ಪೊಲೀಸರು ಆತನಿಂದ 7.47 ಲಕ್ಷ ರೂ. ಮೌಲ್ಯದ 109 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ವಿನೋಬ ನಗರದ ನಿವಾಸಿ ರಾಜ (ುಕರಾಜ, ಗೌತಂರಾಜ) ಚನ್ನಪ್ಪ (35) ಬಂಧಿತ ಆರೋಪಿ.

ಈತನಿಂದ ಮನೆಯಿಂದ ಕಳ್ಳತನ ಮಾಡಿದ್ದ 7.47 ಲಕ್ಷ ರೂ. ಮೌಲ್ಯದ 109 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ನಗರದಲ್ಲಿ ಮನೆಯೊಂದನ್ನು ಕಳ್ಳತನ ಮಾಡಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದ. ಆರೋಪಿ ಪತ್ತೆಗಾಗಿ ಎಸ್ಪಿ ಅಂಶುಕುಮಾರ ಮಾರ್ಗದರ್ಶನದಲ್ಲಿ ಶಹರ ಠಾಣೆ ಪಿಎಸ್​ಐ ಗಡ್ಡೆಪ್ಪ ಗುಂಜುಟಗಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸರು ಆರೋಪಿಯನ್ನು ದಾವಣಗೆರೆ ಬಳಿ ಬಂಧಿಸಿದ್ದಾರೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net