

ಕೆಜಿಎಫ್- ಮನೆಯಲ್ಲಿ ಚಿನ್ನ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಡ್ರಸನ್ಪೇಟೆ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, 94.54 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕೆಜಿಎಫ್ ನಿವಾಸಿ ಎಲ್.ವಾಣಿ(48) ಬಂಧಿತೆ.
ಕಳೆದ 4 ದಿನಗಳ ಹಿಂದೆ ಮಾರಿಕುಪ್ಪಂ ವಾಸಿ ಸುರೇಶ್ ಕುಮಾರ್ ಅವರ ಮನೆಯಲ್ಲಿ ಚಿನ್ನ ಕಳತನವಾಗಿತ್ತು. ಈ ಬಗ್ಗೆ ಆಂಡ್ರಸನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಡಿವೈಎಸ್ಪಿ ಎಸ್.ಪಾಂಡುರಂಗ ಮಾರ್ಗದರ್ಶನದಲ್ಲಿ ರಾರ್ಬಟ್ಸನ್ಪೇಟೆ ವೃತ್ತ ನಿರೀಕ್ಷಕ ನವೀನ್.ಪಿ.ಎಂ ಮತ್ತು ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ. ಚಿನ್ನಾಭರಣ ವಶಕ್ಕೆ ಪಡೆದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.