ಭಾರಿ ಮಳೆಗೆ ಕುಸಿದ ಮನೆ, ಆರು ಮಂದಿ ಪವಾಡಸದೃಶ ಪಾರು

Mulki Heavy rain
Published on

ಮೂಲ್ಕಿ: ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಕೆ.ಎಸ್.ರಾವ್ ನಗರದ ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲನಿಯ ಶ್ರೀ ಮಲ್ಲಿಕಾರ್ಜುನ ಮಠದ ಬಳಿ ಲಕ್ಷ್ಮಿ ಪಕೀರಪ್ಪ ಎಂಬುವರ ಮನೆ ಸಂಪೂರ್ಣ ಕುಸಿದುಬಿದ್ದು ನಷ್ಟ ಸಂಭವಿಸಿದೆ.

ರಾತ್ರಿ ಹೊತ್ತು ಮಳೆ ಸುರಿದಿದ್ದು ಮನೆ ಮೇಲ್ಭಾಗದಲ್ಲಿ ಭಾರಿ ಶಬ್ದ ಉಂಟಾಗಿದೆ. ಈ ಸಂದರ್ಭ ಮನೆಯೊಳಗಿದ್ದ ಲಕ್ಷ್ಮಿಪಕೀರಪ್ಪ ಸಹಿತ ಆರು ಮಂದಿ ಹೊರಗೆ ಓಡಿ ಬಂದಿದ್ದು ಕ್ಷಣಾರ್ಧದಲ್ಲಿ ಮನೆ ಪೂರ್ತಿ ಕುಸಿದು ಬಿದ್ದಿದೆ. ಮನೆಯವರು ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೂಲ್ಕಿ ತಾಲೂಕು ವ್ಯಾಪ್ತಿಯ ಕಿನ್ನಿಗೋಳಿ, ಪಕ್ಷಿಕೆರೆ, ಹಳೆಯಂಗಡಿ, ಅತಿಕಾರಿ ಬೆಟ್ಟು, ಕೊಳಚಿ ಕಂಬಳ ಪರಿಸರದಲ್ಲಿ ಮಳೆಗೆ ಭಾರಿ ಹಾನಿಯಾಗಿದೆ. ಭಾನುವಾರ ಸಂಜೆ ಮಳೆಯ ಅಬ್ಬರ ಕಡಿಮೆಯಾಗಿದ್ದು ಮೋಡ ಮುಸುಕಿದ ವಾತಾವರಣವಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net