

ನಾಪೋಕ್ಲು: ಯವಕಪಾಡಿ ಗ್ರಾಮದಲ್ಲಿ ಭಾರಿ ಮಳೆ, ಗಾಳಿಗೆ ಮನೆಯ ಛಾವಣಿಯ ಶೀಟ್ ಹಾರಿ ಹೋಗಿ ನಷ್ಟ ಸಂಭವಿಸಿದೆ.
ಕಕ್ಕಬೆ ಗ್ರಾಮ ಪಂಚಾಯಿತಿಯ ಯವಕಾಪಾಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಭಾರಿ ಗಾಳಿ ಮಳೆಯಿಂದಾಗಿ ಗ್ರಾಮದ ನಿವಾಸಿ ಚೆಂಗಪ್ಪ ಅವರ ವಾಸದ ಮನೆಯ ಶೀಟ್‌ಹಾರಿ ಹೋಗಿದೆ.
ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.