ಮನೆಗೇ ಬಂದಪ್ಪಳಿಸಿದ ಸಿಡಿಲು; ನಾಲ್ವರಿಗೆ ಗಾಯ..

House
Published on

ಗುಂಡ್ಲುಪೇಟೆ: ರಾಜ್ಯಾದ್ಯಂತ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದ್ದು ಮನೆಯೊಂದಕ್ಕೆ ಸಿಡಿಲು ಬಡಿದಿದ್ದು, ಭಾಗಶಃ ಹಾನಿಗೀಡಾಗಿದೆ. ಮಾತ್ರವಲ್ಲ, ಮನೆಯಲ್ಲಿನ ನಾಲ್ವರು ಗಾಯಗೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತಗ್ಗಲೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಗ್ರಾಮದ ಮಹದೇವಶೆಟ್ಟಿ ಎಂಬುವರ ಮನೆಗೆ ಭಾನುವಾರ ರಾತ್ರಿ ಸಿಡಿಲು ಬಡಿದ ಪರಿಣಾಮ ಮೊದಲ ಮಹಡಿಯ ಮಂಚದ ಮೇಲೆ ಮಲಗಿದ್ದ ಮಣಿಕಂಠ (25), ಕೌಶಿಕ್ (13), ಚೇತನ (19) ಹಾಗೂ ಮಹದೇವಮ್ಮ (45) ಎಂಬುವರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಿಗೆ ತಲಾ 4,300 ಹಾಗೂ ಮನೆಗೆ ಜಖಂ ಆಗಿದ್ದಕ್ಕೆ ಐವತ್ತು ಸಾವಿರ ಪರಿಹಾರ ನೀಡಲಾಗಿದೆ ಎಂದು ತಹಸೀಲ್ದಾರ್ ರವಿಶಂಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net