

ಕುಂದಾಪುರ: ಯಕ್ಷಗಾನ ಕಲಾರಂಗದ ವತಿಯಿಂದ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ತಮ್ಮ ತಂದೆಯ ಸ್ಮರಣಾರ್ಥ ಹಟ್ಟಿಕುದ್ರುವಿನಲ್ಲಿ ನೀಲಾವರ ಮೇಳದ ಭಾಗವತ ತಿಮ್ಮಪ್ಪ ದೇವಾಡಿಗರಿಗೆ 8 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಹಸ್ತಾಂತರ ಕಾರ್ಯಕ್ರಮ ಭಾನುವಾರ ನಡೆಯಿತು.
ಯಕ್ಷಗಾನ ಕಲಾರಂಗದ ವತಿಯಿಂದ ನಿರ್ಮಿಸಿಕೊಟ್ಟ 75ನೇ ಮನೆ ‘ಶ್ರೀ ಮುರಳಿ’ಯನ್ನು ಉಡುಪಿ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಸಂಸ್ಥೆ ಅಧ್ಯಕ್ಷ ಯೋಗೀಶ್ಚಂದ್ರ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಕೆ.ಬಾಲಕೃಷ್ಣ ಶುಭಾಶಂಸನೆಗೈದರು. ನಿವೃತ್ತ ಬ್ಯಾಂಕ್ ಅಧಿಕಾರಿ ಟಿ.ಶ್ರೀಧರ ರಾವ್, ಎಂ.ಗೋಪಿಕೃಷ್ಣ ರಾವ್ ಮುಖ್ಯ ಅತಿಥಿಯಾಗಿದ್ದರು. ಉಡುಪಿ ಗಾಂಧಿ ಆಸ್ಪತ್ರೆಯ ಡಾ.ಹರಿಶ್ಚಂದ್ರ, ಹಿರಿಯ ಇಂಜನಿಯರ್ ಎಂ.ನಾಗೇಶ ಹೆಗ್ಡೆ, ನಾರಾಯಣ ಮೂರ್ತಿ, ಪ್ರೊ.ಎಂ.ಎಲ್.ಸಾಮಗ, ಕೃಷ್ಣರಾಜ ತಂತ್ರಿ, ಯು.ವಿಶ್ವನಾಥ ಶೆಣೈ, ನಿವೃತ್ತ ಬ್ಯಾಂಕ್ ಅಧಿಕಾರಿ ಗಿರೀಶ್ಚಂದ್ರ ಧರ, ಸರಸ್ವತಿ ಜಿ.ರಾವ್, ಪಾವನಿ, ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ ಉಪಸ್ಥಿತರಿದ್ದರು.
ಹಟ್ಟಿಯಂಗಡಿ ದೇವಳದ ಧರ್ಮದರ್ಶಿ ಎಚ್.ಬಾಲಚಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುರಳಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು.