ಮನೆ ಬೀಗ ಮುರಿದು 17.85 ಲಕ್ಷ ರೂ. ಮೌಲ್ಯದ ಚಿನ್ನ, ನಗದು ಕಳ್ಳತನ

Thief
Published on

ಹಾನಗಲ್ಲ: ಮನೆಯ ಬಾಗಿಲ ಬೀಗ ಮುರಿದು ಒಳಗೆ ನುಗ್ಗಿದ ಖದೀಮರು ಬರೋಬ್ಬರಿ 9.50 ಲಕ್ಷ ರೂ. ನಗದು ಹಾಗೂ 7.85 ಲಕ್ಷ ರೂ. ಚಿನ್ನಾಭರಣ ದೋಚಿದ ಘಟನೆ ತಾಲೂಕಿನ ಕೂಸನೂರ ಗ್ರಾಮದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಗ್ರಾಮದ ಧರಣಿ ಜಗನ್ನಾಥ ಕಟ್ಟಿ (56) ಎಂಬುವರ ಮನೆ ಕಳ್ಳತನ ಆಗಿರುವುದು.
ಇವರು ತಾವು ವಾಸವಿದ್ದ ಮನೆಗೆ ಬೀಗ ಹಾಕಿಕೊಂಡು ಪಕ್ಕದ ಮನೆಯಲ್ಲಿ ಮಲಗಿದ್ದರು. ಯಾರೋ ಖದೀಮರು ಮನೆಯ ಬಾಗಿಲ ಬೀಗ ಮುರಿದು ಒಳಗೆ ನುಗ್ಗಿ 9.50 ಲಕ್ಷ ರೂ. ನಗದು ಹಾಗೂ 7.85 ಲಕ್ಷ ರೂ. ಮೌಲ್ಯದ 115 ಗ್ರಾಂ ಚಿನ್ನ ಮತ್ತು 6.5 ಕೆಜಿ ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net