ಮನೆ ಬೀಗ ಮುರಿದು ಚಿನ್ನ, ಬೆಳ್ಳಿ ಕಳ್ಳತನ

Crime Logo
Published on

ಹೂವಿನಹಡಗಲಿ: ಪಟ್ಟಣದಲ್ಲಿ ಮನೆಯೊಂದರ ಬೀಗ ಮುರಿದ ಕಳ್ಳರು ಚಿನ್ನ, ಬೆಳ್ಳಿ ಕದ್ದು ಪರಾರಿಯಾಗಿದ್ದಾರೆ. ಪಟ್ಟಣದ ಕೋಟೆ ಭಾಗದ ಊರಮ್ಮನ ಚೌತಮನಿ ಕಟ್ಟೆ ಪಕ್ಕದಲ್ಲಿರುವ ಮಲ್ಲನಗೌಡ ಅವರ ಮನೆಯಲ್ಲಿ ಭಾನುವಾರ ರಾತ್ರಿ ಕಳವಾಗಿದೆ.

ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದರು. ಸೋಮವಾರ ಬೆಳಗ್ಗೆ ಪಕ್ಕದ ಮನೆಯವರು ಮಲ್ಲನಗೌಡರು ನಡೆಸುತ್ತಿದ್ದ ಅಂಗಡಿ ತೆರೆಯುವಂತೆ ಕರೆ ಮಾಡಿ ತಿಳಿಸಿದ್ದಾರೆ. ಮಲ್ಲನಗೌಡ ನಾನು ಊರಲ್ಲಿಲ್ಲ ಎಂದಿದ್ದಾರೆ. ಆದರೆ, ಮನೆಯ ಬಾಗಿಲು ತೆರೆದಿದೆ ಎಂದು ಪಕ್ಕದ ಮನೆಯವರು ತಿಳಿಸಿ ಅವರ ಮನೆ ಬಳಿ ಹೋಗಿ ನೋಡಿದಾಗ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ.

ನಂತರ ಸಂಬಂಧಿಕರು ಮನೆಯೊಳಗೆ ಹೋಗಿ ನೋಡಿದಾಗ ತಿಜೋರಿ ಬೀಗ ಮುರಿದು ಎಂಟು ತೊಲ ಚಿನ್ನ, 400 ಗ್ರಾಂ ಬೆಳ್ಳಿ ಆಭರಣ ಕಳವಾಗಿರುವುದು ಗೊತ್ತಾಗಿದೆ. ಸ್ಥಳಕ್ಕೆ ಪಟ್ಟಣ ಠಾಣೆ ಪೊಲೀಸರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net