ಮನೆ ಬೀಗ ಮುರಿದು 7.55 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

gold-513062_640
Published on

ರಾಣೆಬೆನ್ನೂರ: ಮನೆ ಬೀಗ ಮುರಿದು ಒಳಗೆ ನುಗ್ಗಿದ ಖದೀಮರು ಬರೋಬ್ಬರಿ 7.55 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಇಲ್ಲಿಯ ಅಶೋಕ ನಗರದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಸುಧಾ ಚನ್ನಬಸಪ್ಪ ಮೈಲಾರದ ಎಂಬುವರ ಮನೆ ಕಳ್ಳತನವಾಗಿರುವುದು.
ಇವರು ವ್ಯಾಪಾರ ಮಾಡುವ ಸಲುವಾಗಿ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದ ಸಮಯದಲ್ಲಿ ಯಾರೋ ಖದೀಮರು ಮನೆಯ ಬೀಗ ಮುರಿದು ಮನೆಯಲ್ಲಿದ್ದ 7.55 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿಯ ಆಭರಣಗಳನ್ನು ದೋಚಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net