ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ

10kls2.
ಹೊರನಾಡು ಗ್ರಾಪಂ ವ್ಯಾಪ್ತಿಯ ಕವನಳ್ಳದಲ್ಲಿ ಗಣೇಶ ಎಂಬುವವರ ಮನೆ ಮೇಲ್ಛಾವಣಿ ಕುಸಿದಿರುವುದು.
Published on

ಕಳಸ: ಕಳಸ ತಾಲೂಕಿನಾದ್ಯಂತ ಸಾಧಾರಣ ಮಳೆ ಮುಂದುವರಿದಿದ್ದು, ನಿರಂತರ ಮಳೆಯಿಂದ ಕವನಳ್ಳ ಗಣೇಶ ಎಂಬುವವರ ಮನೆ ಮೇಲ್ಛಾವಣಿ ಕುಸಿದಿದೆ. ಹೊರನಾಡು ಗ್ರಾಪಂ ವ್ಯಾಪ್ತಿಯ ಕವನಳ್ಳದಲ್ಲಿ ಗಣೇಶ ಅವರ ಮನೆಯ ಮೇಲ್ಛಾವಣಿ ಕುಸಿದು ಅಲ್ಪ ಪ್ರಮಾಣದ ಹಾನಿ ಉಂಟಾಗಿದೆ. ಮನೆಯಲ್ಲಿ ಗಣೇಶ ಮಾತ್ರ ವಾಸವಿದ್ದು, ಕುಸಿಯುವ ವೇಳೆ ಅವರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಕಳೆದ ನಾಲ್ಕು ದಿನಗಳಿಂದ ತಾಲೂಕಿನಾದ್ಯಂತ ಮಳೆ ಮುಂದುವೆರಿದಿದ್ದು, ಕುದುರೆಮುಖ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸೊರಗಿದ ಜಲಪಾತಗಳಿಗೆ ಜೀವಕಲೆ ಬಂದಿದ್ದು, ಕೃಷಿ ಚಟುವಟಿಕೆ ಪ್ರಾರಂಭವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net