ಗಾಳಿ-ಮಳೆಗೆ ಮನೆ ಮೇಲ್ಛಾವಣಿ ಕುಸಿತ

web - melchavani kusitha
ಗಂಗಾ ಅವರ ಮನೆಯ ಮೇಲ್ಛಾವಣಿ ಕುಸಿದಿರುವುದು.
Published on

ಹಳೆಯಂಗಡಿ: ಇಲ್ಲಿನ ಇಂದಿರಾನಗರದಲ್ಲಿ ಗಂಗಾ ಎಂಬವರ ವಾಸ್ತವ್ಯದ ಮನೆಯ ಮೇಲ್ಛಾವಣಿಯು ಮಳೆ ಗಾಳಿಗೆ ಕುಸಿದು ಬಿದ್ದು ಭಾಗಶಃ ಹಾನಿಯಾಗಿದೆ.
ಮೂಲ್ಕಿ ತಾಲೂಕು ಉಪತಹಸೀಲ್ದಾರ್ ದಿಲೀಪ್ ರೋಡ್ಕರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಉಳಿದಂತೆ ತಾಲೂಕು ವ್ಯಾಪ್ತಿಯಲ್ಲಿ ಬಿಸಿಲು ಮಳೆ ವಾತಾವರಣವಿದ್ದು, ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಂಭವವಿದ್ದು ವೃದ್ಧರು ಹೊರಗೆ ತಿರುಗುವುದು ಮತ್ತು ಸೇವಿಸುವ ನೀರು, ಆಹಾರದ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಆರೋಗ್ಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net