ಮನೆ ಹೆಂಚು ತೆಗೆದು 5.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

Thief
Published on

ಬ್ಯಾಡಗಿ: ಮನೆಯ ಹೆಂಚು ತೆಗೆದು ಒಳಗೆ ನುಗ್ಗಿದ ಕಳ್ಳರು 5.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ತಾಲೂಕಿನ ಕಾಶಂಬಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ಗ್ರಾಮದ ನಾಗರಾಜ ಹೊನ್ನಪ್ಪ ಕೆಂಪಲಿಂಗಣ್ಣನವರ (46) ಎಂಬುವರ ಮನೆ ಕಳ್ಳತನವಾಗಿರುವುದು.
ಇವರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಹೆಂಚು ತೆಗೆದು ಒಳೆ ನುಗ್ಗಿ ಟ್ರಜುರಿಯಲ್ಲಿದ್ದ 5.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net