ಗುಂಡ್ಲುಪೇಟೆ: ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ತಾಲೂಕಿನ ತೊಂಡವಾಡಿ ಗ್ರಾಮದ ಸಿದ್ದರಾಜು ಅವರ ಮನೆ ಗೋಡೆ ಶುಕ್ರವಾರ ನಸುಕಿನಲ್ಲಿ ಕುಸಿದಿದೆ..ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.