

ನಾಪೋಕ್ಲು: ಸತತ ಮಳೆಯಿಂದಾಗಿ ಇಲ್ಲಿಗೆ ಸಮೀಪದ ಯವಕಪಾಡಿ ಗ್ರಾಮದ ಮೇದರ ಸುಬ್ರಮಣಿ ಹಾಗೂ ಅದೇ ಗ್ರಾಮದ ಪಾಲೆ ಪಮ್ಮು ಅವರ ಅವರ ವಾಸದ ಮನೆ ಗೋಡೆ ಕುಸಿದು ಹಾನಿ ಸಂಭವಿಸಿದೆ.
ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರುವ ಮೇದರ ಸುಬ್ರಮಣಿ ಹಾಗೂ ಪಾಲೆ ಪಮ್ಮು ಅವರ ಮನೆಯ ಗೋಡೆ ಶುಕ್ರವಾರ ಬೆಳಗ್ಗೆ ಬಿದ್ದ ಭಾರಿ ಮಳೆಗೆ ಕುಸಿದು ಬಿದ್ದಿದೆ. ಈ ಸಂದರ್ಭ ಮನೆಯಲ್ಲಿದ್ದವರು ಜೀವಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.