ಕ್ಷುಲ್ಲಕ ಕಾರಣಕ್ಕೆ ನೇಪಾಳ ಮೂಲದ ಗೃಹಿಣಿ ಆತ್ಮಹತ್ಯೆಗೆ ಶರಣು

Sucide
Published on

ಬೆಂಗಳೂರು: ಗೃಹಿಣಿಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೇಪಾಳ ಮೂಲದ ಭಾಗೀರತಿ(28) ಆತ್ಮಹತ್ಯೆ ಶರಣಾದ ವಿವಾಹಿತೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಚೀನಾದ ಕಮಾಂಡಿಂಗ್​ ಅಧಿಕಾರಿಯನ್ನೂ ಹತ್ಯೆ ಮಾಡಿದೆ ಭಾರತ ಸೇನೆ

ಮೈಕೋಲೇಔಟ್ ಠಾಣಾ ವ್ಯಾಪ್ತಿಯ ಬಿಳೇಕಹಳ್ಳಿಯಲ್ಲಿ ಭಾಗೀರತಿ ಪತಿಯೊಂದಿಗೆ ವಾಸವಿದ್ದರು. ಮೂರು ವರ್ಷಗಳ ಹಿಂದೆ ಸೋನು ಸಿಂಗ್ ಎಂಬಾತನೊಂದಿಗೆ ವಿವಾಹವಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್​) ಇದನ್ನೂ ಓದಿ: ಕೊನೆಗೂ ಕಿಲ್ಲರ್​ ಕರೊನಾಗೆ ಸಿಕ್ತಾ ಔಷಧಿ? ಈ ಕೋವಿಡಾಲ್​ ಮೆಡಿಸಿನ್​ ಹಿಂದಿನ ಅಸಲಿಯತ್ತೇನು?

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net