ಮನೆಕೆಲಸದಾಕೆ ಮೇಲೆ ಅತ್ಯಾಚಾರ

Published on

ಸಿಂಧನೂರು: ತಾಲೂಕಿನ ಗಾಂಧಿನಗರದಲ್ಲಿ ಮಹಿಳೆಯೊಬ್ಬಳು ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ ಆಕೆಯ ಮೇಲೆ ಮನೆ ಮಾಲೀಕ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ರಾಮಕೃಷ್ಣ ಹೋತ ಅತ್ಯಾಚಾರ ಆರೋಪಿ. 30 ವರ್ಷದ ಮಹಿಳೆ ಮನೆಕೆಲಸ ಮಾಡಲೆಂದು ರಾಮಕೃಷ್ಣ ಅವರ ಮನೆಗೆ ಹೋದ ಸಂದರ್ಭದಲ್ಲಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಅನ್ವಯ ಮಂಗಳವಾರ ತುರ್ವಿಹಾಳ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net