ನೇಣು ಹಾಕಿಕೊಂಡು ಗೃಹಿಣಿ ಆತ್ಮಹತ್ಯೆ

crime
Published on

ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ ವೇಳೆ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಕೃಷ್ಣಾಪುರ ಓಣಿಯಲ್ಲಿ ನಡೆದಿದೆ.

ಮಹಿಜಬೀನ್ ಸಾದಿಕ್ ಬಂಕಾಪುರ ಮೃತ ಗೃಹಿಣಿ. ಯಾರು ಇಲ್ಲದಿರುವಾಗ ಮನೆಯ ಕಬ್ಬಿಣದ ರಾಡ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿಯ ಕಿರುಕುಳ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net