ಕೌಟುಂಬಿಕ ಕಲಹದಿಂದ ಗೃಹಿಣಿ ಆತ್ಮಹತ್ಯೆ

Murder Crime
Published on

ಕೌಟುಂಬಿಕ ಕಲಹದಿಂದ ಮನನೊಂದು ಗೃಹಿಣಿ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೇರ್ಗಳ್ಳಿಯ ನ್ಯಾಯಾಂಗ ಬಡಾವಣೆಯ ನಿವಾಸಿ ಭಾಸ್ಕರ್ ಅವರ ಪತ್ನಿ ಲಿಲ್ಲಿ ಶಾಲಿನಿ(35)ಮೃತರು.

ಆಟೋ ಚಾಲಕರಾಗಿರುವ ಭಾಸ್ಕರ್ ಅವರನ್ನು ಲಿಲ್ಲಿ ಶಾಲಿನಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಪತಿಯೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡ ಶಾಲಿನಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net