ಗೃಹಿಣಿ ಅನುಮಾನಸ್ಪದ ಸಾವು

Published on

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಪತಿ ಹಾಗೂ ಅವರ ಕುಟುಂಬದ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ನಂಜನಗೂಡು ತಾಲೂಕು ಗೌಡರಹುಂಡಿ ಗ್ರಾಮದ ದೇವಣ್ಣ ಅವರ ಪತ್ನಿ ಸರೋಜಮ್ಮ (35) ಮೃತರು. ಇವರ ಶವ ಮೈಸೂರು ತಾಲೂಕು ದೂರ ಗ್ರಾಮದ ಜಮೀನಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೌಟುಂಬಿಕ ಕಾರಣದಿಂದ ನನ್ನ ಸೋದರಿ ಸರೋಜಮ್ಮ, ಪತಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದು, ಡಿ.10 ರಂದು ಮನೆ ಬಿಟ್ಟು ತೆರಳಿದ್ದಾರೆ. ಬಳಿಕ ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರಬಹುದು ಎಂದು ಮೃತಳ ಸಹೋದರ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net