ವಿದ್ಯಾರ್ಥಿ ಜೀವನದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಅಗತ್ಯ

Hadagali teachers day
ಹೂವಿನಹಡಗಲಿಯ ಜಿಬಿಆರ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಕಳೆದ ವರ್ಷ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂಘದ ಜಿಲ್ಲಾಧ್ಯಕ್ಷ ಗೌಡ್ರ ಬಸವರಾಜಪ್ಪ, ತಾಲೂಕು ಅಧ್ಯಕ್ಷ ಬಿ.ಪ್ರಕಾಶ, ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ ರೆಡ್ಡಿ, ಪ್ರಾಚಾರ್ಯರಾದ ಎಸ್.ಎಸ್,ಪಾಟೀಲ್, ಕೋರಿ ಹಾಲೇಶ ಇತರರಿದ್ದರು.
Published on

ಹೂವಿನಹಡಗಲಿ: ಸಮಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಗೌಡ್ರ ಬಸವರಾಜಪ್ಪ ಹೇಳಿದರು.

ಪಟ್ಟಣದ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ತಾಲೂಕು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಯುವ ಜನಾಂಗ ಸಿನಿಮಾ ಕ್ಷೇತ್ರದ ತಾರೆಯರನ್ನು ಅನುಕರಿಸುತ್ತಿದ್ದಾರೆ. ಅಭಿಮಾನದಲ್ಲಿ ತಂದೆ-ತಾಯಿಗಳನ್ನು ಕಡೆಗಣಿಸಬಾರದು. ನಿಮಗೆ ಅಕ್ಷರ ಕಲಿಸಿದ ಗುರುಗಳು ಹಾಗೂ ವಿದ್ಯಾಲಯಗಳ ಕೀರ್ತಿ ಹೆಚ್ಚಿಸಿ. ವಿದ್ಯಾರ್ಥಿ ಜೀವನದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸಬೇಕು ಎಂದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ ರೆಡ್ಡಿ ಮಾತನಾಡಿ, ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಹಾಕುವ ಮೂಲಕ ಸಾಧನೆ ಮಾಡಬೇಕು. ನಿರಂತರ ಅಭ್ಯಾಸ ಮಾಡಿದವರಿಗೆ ಯಶಸ್ಸು ಖಚಿತ ಎಂದರು.ಪ್ರಾಚಾರ್ಯರಾದ ಎಸ್.ಎಸ್.ಪಾಟೀಲ್, ಕೋರಿ ಹಾಲೇಶ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಪಿ.ಎಂ.ಅಶೋಕ ಮಾತನಾಡಿದರು. ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ಬಿ.ಪ್ರಕಾಶ ಅಧ್ಯಕ್ಷತೆ ವಹಿಸಿದ್ದರು. ಕಳೆದ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.ಸಂಘದ ಖಜಾಂಚಿ ಎಂ.ಶಿವಪ್ಪ, ಕಾರ್ಯದರ್ಶಿ ವಿರೂಪಾಕ್ಷಪ್ಪ ಬಡಿಗೇರ, ಪ್ರಾಚಾರ್ಯರಾದ ಅಮರೇಗೌಡ, ಎ.ಕೊಟ್ರಗೌಡ, ವೆಂಕಟೇಶ, ಬಿ.ಕಾಳೇಶ, ನೀಲಪ್ಪ, ಈಶ್ವರಪ್ಪ, ಸೋಮನಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net