ಕಾಂಗ್ರೆಸ್ ಯುವ ಘಟಕಕ್ಕೆ ಹೊಯ್ಸಳ ಆಯ್ಕೆ

M R Hoysala
Published on

ಮೈಸೂರು: ಕಾಂಗ್ರೆಸ್‌ನ ಯುವ ಘಟಕದ ಕೆ.ಆರ್.ಕ್ಷೇತ್ರದ ಅಧ್ಯಕ್ಷರಾಗಿ ಎಂ.ಆರ್.ಹೊಯ್ಸಳ ಆಯ್ಕೆಯಾದರು.

ಇತ್ತೀಚೆಗೆ ನಡೆದ ಆಂತರಿಕ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂ.ಆರ್.ಹೊಯ್ಸಳ ಒಟ್ಟು 1708 ಮತ ಪಡೆದಿದ್ದು, 367 ಮತಗಳ ಅಂತರದಿಂದ ಆಯ್ಕೆಯಾದರು.

ಕೆ.ಆರ್.ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು, ತಳಮಟ್ಟದಿಂದ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಆ ಮೂಲಕ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ವೇದಿಕೆ ನಿರ್ಮಿಸಲಾಗುವುದು ಎಂದು ವಿಜಯವಾಣಿಗೆ ತಿಳಿಸಿದರು. ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಕ್ಷೇತ್ರದಲ್ಲಿ ಪಕ್ಷವನ್ನು ಈಗಾಗಲೇ ಉತ್ತಮವಾಗಿ ಸಂಘಟಿಸಿದ್ದಾರೆ. ಈಗಲೂ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಜತೆಗೂಡಿ ಮತ್ತಷ್ಟು ಕೆಲಸ ಮಾಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net