ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ಜಯಚಾಮರಾಜ ಒಡೆಯರ್ ನಾಮಕರಣ ಮಾಡಲು ಮನವಿ

614894-1553263206
Published on

ಮೈಸೂರು: ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ಜಯಚಾಮರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಹಾಗೂ ವಿಧಾನಸಭೆಯಲ್ಲಿ ಅವರ ಭಾವಚಿತ್ರ ಅಳವಡಿಸಿ ಗೌರವ ಸೂಚಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಮೈಸೂರಿನ ಅಭಿವೃದ್ಧಿಗೆ ಮೈಸೂರು ರಾಜಮನೆತನದ ಕೊಡುಗೆ ಅಪಾರ. ನಮ್ಮ ಆಗಿನ ಮೈಸೂರು ರಾಜ್ಯವನ್ನು ಒಂದು ಮಾದರಿಯನ್ನಾಗಿ ರೂಪಿಸುವಲ್ಲಿ ಆಳಿದಂತಹ ಅನೇಕ ರಾಜ ಮಹಾರಾಜರ ಕೊಡುಗೆಗಳಿವೆ. ಈ ಸಾಲಿನಲ್ಲಿ  ಶ್ರೀ ಜಯಚಾಮರಾಜ ಒಡೆಯರ್ ಅವರ ಕಾಣಿಕೆ ಸಹ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು ಲ ವಿಮಾನ ನಿಲ್ದಾಣಕ್ಕೆ ಶ್ರೀ ಜಯಚಾಮರಾಜ ಒಡೆಯರ್ಅವರ ಹೆಸರನ್ನು ನಾಮಕರಣ ಮಾಡಬೇಕು ಹಾಗೂ ವಿಧಾನಸಭೆಯಲ್ಲಿ ಅವರ ಭಾವಚಿತ್ರವನ್ನು ಅಳವಡಿಸಿ ಗೌರವ ಸೂಚಿಸುವಂತೆ ಮೈಸೂರು ರಾಜಮನೆತನದ ಪ್ರಮೋದಾ ದೇವಿ ಒಡೆಯರ್  ಪತ್ರದ ಮೂಲಕ ಕೋರಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಸೋಮಶೇಖರ್ ಮುಖ್ಯಮಂತ್ರಿ ಹಾಗೂ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ReplyForward
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net