

ಮೈಸೂರು: ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಚಾಮುಂಡಿಬೆಟ್ಟದಲ್ಲಿ ರೋಪ್‌ವೇ ಯೋಜನೆ ಜಾರಿಗೆ ತರುವುದು ಅನಿವಾರ್ಯ. ಬೆಂಗಳೂರಿನ ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡುತ್ತಿದ್ದೇವೆ. ಅದೇ ರೀತಿ ಚಾಮುಂಡಿಬೆಟ್ಟದಲ್ಲೂ ನಿರ್ಮಾನ ಮಾಡಲಾಗುವುದು ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.
ರೋಪ್‌ವೇ ನಿಂದ ಪರಿಸರಕ್ಕೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಎಚ್ಚರ ವಹಿಸಲಾಗುವುದು. ರೋಪ್‌ವೇ ನಿರ್ಮಾಣಕ್ಕೆ ಈಗಾಗಲೇ ಎರಡು ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ. ಉತ್ತರ ಭಾರತದಲ್ಲಿ ರೋಪ್‌ವೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಅದೇ ರೀತಿ ಮೈಸೂರಿಗೂ ರೋಪ್‌ವೇ ಅವಶ್ಯಕತೆ ಇದೆ. ಸದ್ಯದಲ್ಲಿಯೇ ಉತ್ತರ ಭಾರತಕ್ಕೆ ಭೇಟಿ ನೀಡಿ ಅಲ್ಲಿ ಪರಿಸರಕ್ಕೆ ಧಕ್ಕೆ ಯಾಗದ ರೀತಿಯಲ್ಲಿ ಯಾವ ರೀತಿ ರೋಪ್‌ವೇ ನಿರ್ಮಾಣ ಮಾಡಿದ್ದಾರೆ ಎಂದು ಪರಿಶೀಲಿಸಿ ಚಾಮುಂಡಿಬೆಟ್ಟದಲ್ಲೂ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.