ಕೆಆರ್‌ಎಸ್‌ನಲ್ಲಿ ಡಿಸ್ನಿ ಲ್ಯಾಂಡ್ ನಿರ್ಮಾಣ ಶೀಘ್ರ : ಸಚಿವ ಸಿ.ಪಿ. ಯೋಗೇಶ್ವರ್

Yogeshwar
Published on

ಮೈಸೂರು: ಕೆಆರ್‌ಎಸ್‌ನ ಬೃಂದಾವನ ಆವರಣದಲ್ಲಿ ಡಿಸ್ನಿ ಲ್ಯಾಂಡ್ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಕ್ಯಾಬಿನೆಟ್ ಒಪ್ಪಿಗೆ ಮಾತ್ರ ಬಾಕಿ ಉಳಿದಿ ದ್ದು, ಶೀಘ್ರದಲ್ಲಿಯೇ ಯೋಜನೆಗೆ ಚಾಲನೆ ನೀಡಲಾಗುವುದು ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪ್ರವಾಸೋದ್ಯಮ ಕುರಿತು ಹಮ್ಮಿಕೊಂಡ ಸಂವಾದದಲ್ಲಿ ಮಾತನಾಡಿದ ಅವರು, ಮೈಸೂರನ್ನು ಟೂರಿಸ್ಟ್ ಡೆಸ್ಟಿನೇಷನ್ ಆಗಿ ರೂಪಿಸಲು ಡಿಸ್ನಿ ಲ್ಯಾಂಡ್ ಯೋಜನೆಯ ಅವಶ್ಯಕತೆ ಇದೆ. ಡಿಸ್ನಿ ಲ್ಯಾಂಡ್ ನಿರ್ಮಾಣಕ್ಕೆ ಸರ್ಕಾರದ ಅನುದಾನ ಬಳಕೆ ಮಾಡುವುದಿಲ್ಲ. ಖಾಸಗಿ ಸಹಭಾಗಿತ್ವದೊಂದಿಗೆ ನಿರ್ಮಾಣ ಮಾಡಲಾಗುವುದು. ಕೆಆರ್‌ಎಸ್ ಜಲಾಶಯಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆಯಾಗದಂತೆ ತಜ್ಞರ ಅಭಿಪ್ರಾಯ ಪಡೆದು ಡಿಸ್ನಿ ಲ್ಯಾಂಡ್ ನಿರ್ಮಿಸಲಾಗುವುದು. ಯೋಜನೆಯನ್ನು ನಾಲ್ಕು ವರ್ಷದ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net