ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ ಭೂಬಾಲನ್​

District Collector Bhubalan inspected the site
ಬಸವನಬಾಗೇವಾಡಿ ಮೆಗಾ ಮಾರುಕಟ್ಟೆಯಲ್ಲಿ ವಾಣಿಜ್ಯ ಮಳಿಗೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್​ ವೀಸಿದರು.
Published on

ಬಸವನಬಾಗೇವಾಡಿ: ಶ್ರೀದಲ್ಲಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್​ ಹೇಳಿದರು.

ಬುಧವಾರ ಪಟ್ಟಣದಲ್ಲಿ ಪ್ರಾಧಿಕಾರದ ಕಚೇರಿಗಾಗಿ ಸ್ಥಳ ಪರಿಶೀಲನೆ ಹಾಗೂ ಮೆಗಾ ಮಾರುಕಟ್ಟೆಯ ಮುಂದುವರಿದ ವಾಣಿಜ್ಯ ಮಳಿಗೆ ಕಾಮಗಾರಿ ಸೇರಿ ವಿವಿಧ ಕಾಮಗಾರಿ ವೀಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರದ ಕಚೇರಿ ಸ್ಥಾಪನೆಗಾಗಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಚರ್ಚಿಸಿ ಶ್ರೀದಲ್ಲಿ ಕಚೇರಿ ಆರಂಭಿಸಲಾಗುವುದು. ಈಗಾಗಲೇ ಪ್ರಾಧಿಕಾರಕ್ಕ್ಕೆ ಆಯುಕ್ತರ ನೇಮಕವಾಗಿದ್ದು, ಶ್ರೀದಲ್ಲಿ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗವುದು ಎಂದರು. ನಂದಿ ತರಕಾರಿ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಶೆಡ್​ ಕಾಮಗಾರಿ ಸಮರ್ಪಕವಾಗಿ ಮಾಡಬೇಕು ಎಂದು ಮುಖ್ಯಾಧಿಕಾರಿಗೆ ಸೂಚಿಸಿದರು.

ನಂದಿ ಬಡಾವಣೆಯಲ್ಲಿ ನಡೆಯುತ್ತಿರುವ ಡಾಂಬರ್​ ರಸ್ತೆ ಕಾಮಗಾರಿ ವೀಸಿದ ಅವರು, ಕಾಮಗಾರಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪಟ್ಟಣದಲ್ಲಿ ನಡೆಯುತ್ತಿರುವ ಎಲ್ಲ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಮೆಗಾ ಮಾರುಕಟ್ಟೆಯಲ್ಲಿ ಉಳಿದ 82 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಶ್ರೀ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಬೀದಿ ಬದಿ ವ್ಯಾಪಾರಸ್ಥರಿಗೆ ಸರಿಯಾದ ವ್ಯವಸ್ಥೆ ಮಾಡುವಂತೆ ಬೀದಿ ಬದಿ ವ್ಯಾಪಾರಸ್ಥರ ಪರವಾಗಿ ಬಸವರಾಜ ಹೂಗಾರ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ಜಿಲ್ಲಾಧಿಕಾರಿಗಳು ಐತಿಹಾಸಿಕ ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ಅರ್ಚಕ ಗೌರಿಶಂಕರ ಚರಂತಿಮಠ ಅವರು ಡಿಸಿ ಅವರನ್ನು ಸನ್ಮಾನಿಸಿದರು.

ಕಂದಾಯ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ, ಜಿಪಂ ಎಇಇ ವಿಲಾಸ ರಾಠೋಡ, ತಹಸೀಲ್ದಾರ್​ ವೈ.ಎಸ್​.ಸೋಮನಕಟ್ಟಿ, ಪುರಸಭೆ ಮುಖ್ಯಾಧಿಕಾರಿ ಎಚ್​.ಎಸ್​.ಚಿತ್ತರಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಇಇ ವಿ.ಎನ್​.ನ್ಯಾಮಗೊಂಡ, ನತ್ಯಾಜ್ಯ ವಿಲೇವಾರಿ ಅಧಿಕಾರಿ ಸ್ನೇಹಾ ನಾಯಕ, ಪುರಸಭೆ ಅಭಿಯಂತ ಮಹಾದೇವ ಜಂಬಗಿ, ಸಂತೋಷ ಗಿಡ್ಡಸನ್ನವರ, ಪುರಸಭೆ ಆರೋಗ್ಯ ನಿರೀಕ ಮಹೇಶ ಹಿರೇಮಠ, ಪಿಎಸ್​ಐ ಗುರುಶಾಂತ ದ್ಯಾಶ್ಯಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net