

ಇಂಡಿ: ವಿಜಯನಗರದ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20ರಂದು ಜರುಗಲಿರುವ ಬೃಹತ್ ಕಾಂಗ್ರೆಸ್ ಸಮಾವೇ ಹಾಗೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮದ ಕುರಿತು ಚರ್ಚಿಸಲು 19ರಂದು ಬೆಳಗ್ಗೆ 9ಕ್ಕೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯ ಜಾವೀದ್ ಮೋಮಿನ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಯಶವಂತರಾಯಗೌಡ ಪಾಟೀಲ ನೇತೃತ್ವದಲ್ಲಿ ನಡೆಯಲಿರುವ ಪೂರ್ವ ಭಾವಿ ಸಭೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಬೈಲ ಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಭಾಗವಹಿಸಲಿದ್ದು, ಪಕ್ಷದ ಸ್ಥಳಿಯ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.